Wednesday, January 12, 2011

Snakegourd chutney - ಪಡುವಲಕಾಯಿ ತಿರುಳಿನ ಚಟ್ನಿ:

ಕೆಲವು ತರಕಾರಿಗಳ ಕಾಯಿಯ ತಿರುಳನ್ನು ಸಹ ಎಸೆಯದೆ ನಾವು ಅದನ್ನು ಅಡಿಗೆಯಲ್ಲಿ ಉಪಯೋಗಿಸಬಹುದು. ತಿರುಳಿನಲ್ಲು ಸಹ ಒಳ್ಳೆಯ ಅಂಶಗಳಿರುತ್ತವೆ. ಕೆಲವು ತರಕಾರಿಗಳ ಸಿಪ್ಪೆ, ತಿರುಳು ಮತ್ತು ಸೊಪ್ಪು ಎಲ್ಲವೂ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಉಪಯೋಗವಾಗುತ್ತದೆ.  ಆಗಾಗಿ ಉಪಯೋಗಿಸಬಹುದಾದಂತ ತರಕಾರಿಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿ. ಪಡುವಲ ಕಾಯಿಯಲ್ಲಿ ಯಾವುದನ್ನು ಬಿಸಾಡುವಂತಿಲ್ಲ. ಪಡುವಲಕಾಯಿಯನ್ನು ದಿನನಿತ್ಯದ ಅಡಿಗೆಯಲ್ಲಿ ಬಳಸಿದರೆ ಬಿ.ಪಿ ಇರುವವರಿಗೆ ತುಂಬಾ ಉಪಯುಕ್ತವಾಗುತ್ತದೆ. ಅದರಲ್ಲಿ ತಿರುಳಿನಲ್ಲಿ ಚಟ್ನಿ. ಸಿಪ್ಪೆಯಲ್ಲಿ ಸಹ ಮತ್ತು ಒಳಗಿನ ಕಾಯಿಯಿಂದ ಹುಳಿ,ಸಾರು ಮತ್ತು ಪಲ್ಯವನ್ನು ತಯಾರಿಸುತ್ತೇವೆ. ಈಗ ಇಲ್ಲಿ ಪಡುವಲಕಾಯಿಯ ತಿರುಳಿನ ಚಟ್ನಿಯನ್ನು ತಯಾರಿಸೋಣ.

ಪಡುವಲಕಾಯಿ ತಿರುಳಿನ ಚಟ್ನಿ:

ಪಡುವಲಕಾಯಿ ತಿರುಳು
ಸ್ವಲ್ಪ ಕಾಯಿತುರಿ
ಹುಣಸೇಹಣ್ಣು ಚೂರು
ಹಸಿಮೆಣಸಿನಕಾಯಿ
ಉದ್ದಿನಬೇಳೆ - ಒಂದು ಚಮಚ
ಉಪ್ಪು ರುಚಿಗೆ
ಒಗ್ಗರಣೆಗೆ;
ಎಣ್ಣೆ, ಜೀರಿಗೆ,ಸಾಸಿವೆ,ಕರಿಬೇವು

ತಯಾರಿಸುವ ರೀತಿ:

ಉದ್ದಿನಬೇಳೆಯನ್ನು ಸ್ವಲ್ಪ ಹುರಿದುಕೊಂಡು ಅದಕ್ಕೆ ತೆಂಗಿನತುರಿ,ಉಪ್ಪು,ಹುಣಸೇಹಣ್ಣು,ಹಸಿಮೆಣಸಿನಕಾಯಿ ಮತ್ತು ಉದ್ದಿನಕಾಳು ಹಾಕಿ ನುಣ್ಣಗೆ ರುಬ್ಬಿ.
ಒಗ್ಗರಣೆಗೆ ಎಣ್ಣೆ ಹಾಕಿ ಕಾದಬಳಿಕ ಜೀರಿಗೆ, ಸಾಸಿವೆ ಮತ್ತು ಕರಿಬೇವು ಹಾಕಿ, ಒಗ್ಗರಣೆಯನ್ನು ರುಬ್ಬಿದ ಚಟ್ನಿಗೆ ಸೇರಿಸಿ, ಬೆರೆಸಿ. ಇದು ತುಂಬಾ ರುಚಿಯಾಗಿರುವುದು ಮತ್ತು ಆರೋಗ್ಯಕ್ಕೂ ಒಳ್ಳೆಯದು.

3 comments:

ತೇಜಸ್ವಿನಿ ಹೆಗಡೆ said...

ತುಂಬಾ ಉಪಯುಕ್ತ ಮಾಹಿತಿ. ಖಂಡಿತ ಪ್ರಯತ್ನಿಸುವೆ. ಧನ್ಯವಾದಗಳು.

- ಇದು ನನ್ನ ಅಡಿಗೆ ಬ್ಲಾಗ್ - ಒಗ್ಗರಣೆ- http://tejaswini-hegde.blogspot.com/2011/01/blog-post_19.html

Unknown said...

Kannadali aduge thumba upayuktha mahithi dhanyavadagalu

Unknown said...

Kannadali aduge thumba upayuktha mahithi dhanyavadagalu

Popular Posts