ಹುರುಳಿಕಾಯಿ /ಬೀನ್ಸ್ ನಲ್ಲಿ ಬಲಿತಿರುವ ಕಾಯಿ ತೆಗೆದುಕೊಂಡರೆ ಅದರಲ್ಲಿ ನಾರು ಹೆಚ್ಚಾಗಿರುತ್ತದೆ,ಅದು ಚೆನ್ನಾಗಿರುವುದಿಲ್ಲ. ಆದ್ದರಿಂದ ನೋಡಿ ಎಳೆಯ ಮತ್ತು ಹಸಿರಾಗಿರುವ ಕಾಯಿಯನ್ನು ತೆಗೆದುಕೊಳ್ಳಿ. ಹುರುಳಿಕಾಯಿಯಲ್ಲಿ ನಾರಿನ ಅಂಶವಿರುವುದರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಪಲ್ಯ,ಸಾರು,ಸಾಗು ಯಾವುದಕ್ಕೆ ಬೇಕಾದರೂ ಇದನ್ನು ಬಳಸಬಹುದು. ಇದು ಎಲ್ಲದಕ್ಕು ಹೊಂದಿಕೊಳ್ಳುತ್ತದೆ. ಇಲ್ಲಿ ಬರೆದಿರುವ ಸಿಂಪಲ್ ಪಲ್ಯದಲ್ಲಿಯೇ ತುಂಬಾ ರುಚಿ ಜಾಸ್ತಿಯಾಗಿರುತ್ತದೆ. ಈ ಪಲ್ಯ ಸೈಡ್ ಡಿಶ್ ಅಥವಾ ಚಪಾತಿ,ಪೂರಿ,ಪರೋಟ ಮತ್ತು ಬ್ರೆಡ್ ಜೊತೆ ಸಹ ಚೆನ್ನಾಗಿರುತ್ತದೆ. ಮಕ್ಕಳಿಗೂ ಇಷ್ಟವಾಗುವ ಪಲ್ಯ. ಎಲ್ಲರಿಗೂ ತಿಳಿದಿರುವಂತೆ ಹುರುಳಿಕಾಯಿ ಪಲ್ಯದ ಪಫ್ ನಲ್ಲಿ ಅಂತೂ ಹೆಚ್ಚಿನ ರುಚಿ ಇರುತ್ತದೆ. ಪಫ್ ತಯಾರಿಸುವಾಗ ಆಲೂಗೆಡ್ಡೆ ಪಲ್ಯದ ಬದಲು, ಈ ಪಲ್ಯಕ್ಕೆ ಸ್ವಲ್ಪ ಮಸಾಲೆ ಹಾಕಿ ಬಳಸಬಹುದು.
ಹುರುಳಿಕಾಯಿ ಪಲ್ಯ / ಬೀನ್ಸ್ ಪಲ್ಯ:
ಬೇಕಾಗುವ ಪದಾರ್ಥಗಳು;
ಹುರುಳಿಕಾಯಿ - ಅರ್ಧ ಕಿಲೋ
ಈರುಳ್ಳಿ - ಒಂದು, ಸಣ್ಣಗೆ ಹೆಚ್ಚಿ,
ಹಸಿಮೆಣಸಿನಕಾಯಿ -ರುಚಿಗೆ, ಉದ್ದಕ್ಕೆ ಸೀಳಿಕೊಂಡರೆ ಉತ್ತಮ
ಎಣ್ಣೆ - ಅವಶ್ಯಕತೆ ಇದ್ದಷ್ಟು
ಸಾಸಿವೆ ಸ್ವಲ್ಪ
ಕರಿಬೇವು- ಒಂದು ಗರಿ, ಆಗೇ ಕೈಯಲ್ಲಿ ಮುರಿದುಕೊಳ್ಳಿ.
ಕಡ್ಲೆಬೇಳೆ - ಒಂದು ಚಮಚ
ಉದ್ದಿನಬೇಳೆ - ಒಂದು ಚಮಚ
ಅರಿಶಿನ ಚಿಟಿಕೆ
ಉಪ್ಪು ರುಚಿಗೆ
ಕಾಯಿತುರಿ ಸ್ವಲ್ಪ ಜಾಸ್ತಿ ಇರಲಿ
ಕೊತ್ತುಂಬರಿಸೊಪ್ಪು ಸಣ್ಣಗೆ ಹೆಚ್ಚಿದ್ದು.
ವಿಧಾನ:
ಮೊದಲು ಹುರುಳಿಕಾಯಿಯನ್ನು ಚೆನ್ನಾಗಿ ತೊಳೆದು, ನಾರು ತೆಗೆದು ಬಿಡಿಸಿಕೊಂಡು, ಕಾಯಿಯನ್ನು ಸಣ್ಣಗೆ ಒಂದೇ ಸಮನಾಗಿ ಕತ್ತರಿಸಿ.
ಬಾಣಲೆಗೆ ಎಣ್ಣೆ ಹಾಕಿ, ಕಾದ ಬಳಿಕ, ಸಾಸಿವೆ,ಕಡ್ಲೆಬೇಳೆ, ಉದ್ದಿನಬೇಳೆ, ಹಸಿಮೆಣಸಿನಕಾಯಿ ಮತ್ತು ಈರುಳ್ಳಿ ಹಾಕಿ, ಬಾಡಿಸಿ, ಕರಿಬೇವು, ಅರಿಶಿನ ಮತ್ತು ಉಪ್ಪು ಹಾಕಿ ಒಂದೆರಡು ನಿಮಿಷ ಹುರಿದು, ಈರುಳ್ಳಿ ಬೆಂದಿದೆ ಎನಿಸಿದ ಬಳಿಕ ಹೆಚ್ಚಿದ ಹುರುಳಿಕಾಯಿಯನ್ನು ಸೇರಿಸಿ, ಸ್ವಲ್ಪ ಹೊತ್ತು ಅದರಲ್ಲಿಯೇ ಹುರಿದು ಬೇಯಿಸಿ. ಮಧ್ಯೆ ಮಧ್ಯೆ ತಿರುವುತ್ತಿರಿ. ಸ್ವಲ್ಪ ನೀರು ಚಿಮುಕಿಸಿ,ಮುಚ್ಚಿಟ್ಟು, ಕಾಯಿ ಬೇಯುವವರೆಗು ಬೇಯಿಸಿ. ಇದು ಸ್ವಲ್ಪ ಬೇಗ ಬೇಯುತ್ತದೆ. ತುಂಬಾ ಸಮಯ ತೆಗೆದುಕೊಳ್ಳುವುದಿಲ್ಲ. ಎಳೆಯದಾಗಿದ್ದರೆ ಬೇಗ ಬೇಯುವುದು, ಬಲಿತಿದ್ದರೆ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ನಂತರ ಅದಕ್ಕೆ ಕಾಯಿತುರಿ ಮತ್ತು ಕೊತ್ತುಂಬರಿ ಸೊಪ್ಪು ಎಲ್ಲವನ್ನು ಹಾಕಿ ಚೆನ್ನಾಗಿ ಬೆರೆಸಿ. ಇಳಿಸಿ. ಇದನ್ನು ಊಟಕ್ಕೆ ನೆಂಚಿಕೊಳ್ಳಲು ಸೈಡ್ ಡಿಶ್ ಆಗಿ / ಚಪಾತಿಗೆ ಕೊಡಬಹುದು. ಚಪಾತಿ ಮಧ್ಯೆ ಸ್ಯಾಂಡ್ ವಿಚ್ ತರಹ ರೋಲ್ ಮಾಡಿಕೊಂಡು ತಿನ್ನಲು ಕೂಡ ಚೆನ್ನಾಗಿರುತ್ತದೆ. ಎರಡು ಬ್ರೆಡ್ ಗಳ ಮಧ್ಯೆಯೂ ಪಲ್ಯ ಇಟ್ಟು ತಿನ್ನಬಹುದು, ಪಫ್ ತರಹ ರುಚಿಯಾಗಿರುತ್ತದೆ.
* ತರಕಾರಿಗಳನ್ನು ಕೊಳ್ಳುವಾಗ ಯಾವಾಗಲೂ ಗಮನ ಹರಿಸಬೇಕು, ತುಂಬಾ ಬಲಿತಿರುವ ತರಕಾರಿಗಳನ್ನು ಕೊಂಡುಕೊಳ್ಳಬೇಡಿ, ಅದರಲ್ಲಿರಬೇಕಾದ ವಿಟಮಿನ್ಸ್,ಪ್ರೋಟಿನ್ಸ್ ಮತ್ತು ಇತರೆ ಸತ್ವಗಳು ಬಲಿತ ಕಾಯಿಯಲ್ಲಿ ಕಡಿಮೆ ಇರುತ್ತದೆ, ಕೆಲವೊಂದರಲ್ಲಿ ಇರುವುದೇ ಇಲ್ಲ. ಆದ್ದರಿಂದ ಅದನ್ನು ತಿಂದು ಪ್ರಯೋಜನವೂ ಆಗುವುದಿಲ್ಲ. ಬೇಯಿಸುವುದು ಕಷ್ಟ ಮತ್ತು ಬೇಯಲು ಬಹಳ ಸಮಯ ಕೂಡ ತೆಗೆದುಕೊಳ್ಳುತ್ತದೆ. ಆಗಾಗಿ ಎಳೆಯ ಮತ್ತು ಮಧ್ಯಮ ರೀತಿಯ ಹಾಗೂ ತಾಜಾ ಆಗಿರುವ ತರಕಾರಿಗಳನ್ನು ಮಾತ್ರ ತೆಗೆದುಕೊಂಡು ಉಪಯೋಗಿಸಿ.
Wednesday, April 20, 2011
Subscribe to:
Posts (Atom)
Popular Posts
-
ತರಕಾರಿ ಸಾಗು ಅಥವ ಕೂಟು ಎಲ್ಲವುದಕ್ಕು ಹೊಂದಿಕೊಳ್ಳುವಂತಹದ್ದು. ಅಂದರೆ ಇದನ್ನು ದೋಸೆ, ಚಪಾತಿ,ಪರೋಟ,ರೊಟ್ಟಿ,ಪೂರಿ ಮತ್ತು ಅನ್ನದ ಜೊತೆಯಲ್ಲಿ ತಿನ್ನಬಹುದು. ಜೊತೆಯಲ್ಲ...
-
ಆಲೂ ಪರೋಟ: ಹೂರಣಕ್ಕೆ ಬೇಕಾಗುವ ಸಾಮಗ್ರಿಗಳು: ಬೇಯಿಸಿದ ಆಲೂಗೆಡ್ಡೆ-ಒಂದು ಬಟ್ಟಲು ಅಚ್ಚ ಖಾರದ ಪುಡಿ-ಕಾಲು ಚಮಚ ಉಪ್ಪು ರುಚಿಗೆ ತಕ್ಕಷ್ಟು ಚಾಟ್ ಮಸಾಲಾ-ಕಾಲು ಚಮಚ ...
-
ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಸಾಲು. ಪ್ರತಿವಾರವೂ ಹಬ್ಬ-ಹರಿದಿನಗಳು. ಹಬ್ಬಗಳು ಎಂದರೆ ಸಿಹಿ ಅಡುಗೆಗಳು ಸಾಮಾನ್ಯ. ಒಂದೊಂದು ಹಬ್ಬಕ್ಕೂ ಒಂದೊಂದು ಬಗೆಯ ಸಿಹಿ ಅಡುಗೆ ಮಾ...
-
ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಸಾಲು. ಪ್ರತಿವಾರವೂ ಹಬ್ಬ-ಹರಿದಿನಗಳು. ಹಬ್ಬಗಳು ಎಂದರೆ ಸಿಹಿ ಅಡುಗೆಗಳು ಸಾಮಾನ್ಯ. ಒಂದೊಂದು ಹಬ್ಬಕ್ಕೂ ಒಂದೊಂದು ಬಗೆಯ ಸಿಹಿ ಅಡುಗೆ ಮಾ...
-
ಟಮೋಟ ಚಟ್ನಿ: ಬೇಕಾಗುವ ಸಾಮಗ್ರಿಗಳು: ಟಮೋಟ - ಅರ್ಧ ಕೆ.ಜಿ ಈರುಳ್ಳಿ - ಎರಡು ಬೆಳ್ಳುಳ್ಳಿ - ಹತ್ತು ಎಸಳು ಒಣಮೆಣಸಿನಕಾಯಿ - ರುಚಿಗೆ ತಕ್ಕಷ್ಟು ಹುಣಸೆಹಣ್ಣು -...
-
ಬಿಸಿಬೇಳೆ ಭಾತ್ ಪುಡಿ: ತಯಾರಿಸಲು ಬೇಕಾಗುವ ಸಾಮಗ್ರಿಗಳು: ಒಣಮೆಣಸಿನಕಾಯಿ -ಹತ್ತು / ಖಾರಕ್ಕೆ ತಕ್ಕಷ್ಟು ಧನಿಯ- ಎರಡು ಚಮಚ ಮೆಂತ್ಯ -ಅರ್ಧ ಚಮಚ ಜೀರಿಗೆ-ಒಂದು ಚ...
-
ಗೋಳಿಬಜೆಯಲ್ಲಿ ಅನೇಕ ವಿಧಗಳಿವೆ,ಇದು ಅವುಗಳಲ್ಲಿ ಒಂದು ಬಗೆ,ತುಂಬಾ ಸುಲಭವಾದ ಮತ್ತು ಕಮ್ಮಿ ಸಾಮಗ್ರಿಗಳು ಬೇಕಾಗುವಂತಹ ರೆಸಿಪಿ. ತಕ್ಷಣವೇ ತಯಾರಿಸಬಹುದಾದ ಬೋಂಡಾ. ಗೋಳ...
-
ರಸಂ ಪುಡಿ / ರಸಂ ಪೌಡರ್ ಬೇಕಾಗುವ ಪದಾರ್ಥಗಳು: ಒಣ ಮೆಣಸಿನ ಕಾಯಿ - ಒಂದು ಬಟ್ಟಲು ಧನಿಯಾ ಬೀಜ - ಅರ್ಧ ಬಟ್ಟಲು ಜೀರಿಗೆ - ಒಂದು ದೊಡ್ಡ ಚಮಚ ಮೆಣಸು - ಒಂದು ದೊಡ...
-
ಈರುಳ್ಳಿ ಟಮೋಟ ಚಟ್ನಿ: ಬೇಕಾಗುವ ಸಾಮಗ್ರಿಗಳು: 1. ಈರುಳ್ಳಿ- 2 2. ಟೊಮೆಟೊ- 4-5 3. ಹಸಿಮೆಣಸಿನ ಕಾಯಿ- 2 4. ಉಪ್ಪು- ರುಚಿಗೆ ತಕ್ಕಷ್ಟು 5. ಅಚ್ಚ ಖಾರದ ಪ...